HomeKarnatakaBIG NEWS: ಹನುಮನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂದ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ...

BIG NEWS: ಹನುಮನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂದ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಮನಿಗೂ ಹನುಮಂತನಿಗೂ ಯಾವ ರೀತಿ ಸಂಬಂಧವಿದೆಯೋ ಅದೇ ರೀತಿಯ ಸಂಬಂಧ ಹನುಮನಿಗೂ ಬಜರಂಗದಳಕ್ಕೂ ಇದೆ. ಇದನ್ನು ಕಾಂಗ್ರೆಸ್ ನವರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜರಂಗದಳ ಬ್ಯಾನ್ ವಿಚಾರವಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ.

ಪ್ರಣಾಳಿಕೆಯ ಅಂಶ ಸಮರ್ಥಿಸಿಕೊಂಡಿದ್ದ ಡಿ.ಕೆ. ಶಿವಕುಮಾರ್, ನಾವೂ ಆಂಜನೇಯನ ಭಕ್ತರೇ. ಹನುಮನಿಗೂ ಬಜರಂಗದಳಕ್ಕೂ ಏನು ಸಂಬಂಧ? ಬಜರಂಗಿಯ ಹೆಸರು ಇಟ್ಟುಕೊಂಡ ಮಾತ್ರಕ್ಕೆ ಒಂದೇ ಎನ್ನುವುದು ಸರಿಯಲ್ಲ. ಬಜರಂಗದಳ ಬ್ಯಾನ್ ಎಂದಿದ್ದಕ್ಕೆ ಬಿಜೆಪಿಯವರು ಯಾಕೆ ಗಾಬರಿಯಾಗುತ್ತಿದ್ದಾರೆ ಎಂದು ಟಾಂಗ್ ನೀಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular