HomeKarnatakaBIG NEWS: ಪ್ರಣಾಳಿಕೆ ಸುಟ್ಟಿದ್ದು ಪ್ರಜಾಪ್ರಭುತ್ವಕ್ಕೆ ಅಪಮಾನ; ಖರ್ಗೆ ಆಕ್ರೋಶ

BIG NEWS: ಪ್ರಣಾಳಿಕೆ ಸುಟ್ಟಿದ್ದು ಪ್ರಜಾಪ್ರಭುತ್ವಕ್ಕೆ ಅಪಮಾನ; ಖರ್ಗೆ ಆಕ್ರೋಶ

ಕಲಬುರ್ಗಿ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಪ್ರತಿ ಸುಟ್ಟು ಹಾಕುವ ಮೂಲಕ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಈಶ್ವರಪ್ಪನವರು ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಟ್ಟು ಹಾಕಿದ್ದು ಸರಿಯಲ್ಲ, ಓರ್ವ ಮಾಜಿ ಡಿಸಿಎಂ, ಮಾಜಿ ಸಚಿವರಾಗಿ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ. ಜನರಿಗೆ ನೀಡಿದ ಗ್ಯಾರಂಟಿ ಯೋಜನೆಗಳನ್ನೇ ಸುಟ್ಟು ಹಾಕುವುದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನೂ ಒಬ್ಬ ಹಿಂದೂ, ಅವರೂ ಕೂಡ ಒಬ್ಬ ಹಿಂದೂ. ಬಿಜೆಪಿಯವರ ಹಿಂದುತ್ವ ಬೇರೆ, ನಮ್ಮ ಹಿಂದುತ್ವವೇ ಬೇರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular