HomeKarnatakaBIG NEWS: ಬಿ.ವೈ. ವಿಜಯೇಂದ್ರಗೆ ಇನ್ನಷ್ಟು ಜವಾಬ್ದಾರಿ ಕೊಟ್ಟ ಹೈಕಮಾಂಡ್

BIG NEWS: ಬಿ.ವೈ. ವಿಜಯೇಂದ್ರಗೆ ಇನ್ನಷ್ಟು ಜವಾಬ್ದಾರಿ ಕೊಟ್ಟ ಹೈಕಮಾಂಡ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ.

ಬಿ.ವೈ. ವಿಜಯೇಂದ್ರಗೆ ಸುಮಾರು 20 ಕ್ಷೇತ್ರಗಳ ಪ್ರಚಾರಕ್ಕೆ ತೆರಳಲು ಹೈಕಮಾಂಡ್ ಸೂಚನೆ ನೀಡಿದೆ. ಈ ಮೂಲಕ ಲಿಂಗಾಯಿತ ಮತದಾರರನ್ನು ಸೆಳೆಯಲು ಪ್ಲಾನ್ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಸೇರಿದಂತೆ ಹಲವೆಡೆ ಶ್ರೀರಾಮುಲು, ಗೋವಿಂದ ಕಾರಜೋಳ, ತಿಪ್ಪಾರೆಡ್ಡಿ, ಪೂರ್ಣಿಮಾ ಸೇರಿದಂತೆ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವಂತೆ ಸೂಚಿಸಲಾಗಿದೆ.

ಯಡಿಯೂರಪ್ಪ ಎಲ್ಲೆಡೆ ಪ್ರಚಾರಕ್ಕೆ ಲಭ್ಯವಿಲ್ಲದ ಕಾರಣ ಕೊನೇ ಕ್ಷಣದಲ್ಲಿ ವಿಜಯೇಂದ್ರ ಮೂಲಕ ಪ್ರಚಾರ ನಡೆಸಿ ಹೆಚ್ಚಿನ ಮತ ಗೆಲ್ಲುವ ತಂತ್ರ ಹೆಣೆಯಲಾಗಿದ್ದು, ಅದಕ್ಕಾಗಿ ವಿಜಯೇಂದ್ರಗೆ ವಿಶೇಷ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular