HomeKarnatakaBIG NEWS: ಪ್ರಧಾನಿ ಮೋದಿ ರೋಡ್ ಶೋ ನಲ್ಲಿ ಬದಲಾವಣೆ

BIG NEWS: ಪ್ರಧಾನಿ ಮೋದಿ ರೋಡ್ ಶೋ ನಲ್ಲಿ ಬದಲಾವಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ನಲ್ಲಿ ಬದಲಾವಣೆ ಮಾಡಲಾಗಿದೆ. ಮೇ 6 ಶನಿವಾರದಂದು ನಿಗದಿಯಾಗಿದ್ದ ಎರಡು ರೋಡ್ ಶೋ ಬದಲಾಗಿ ಶನಿವಾರ ಹಾಗೂ ಭಾನುವಾರ ಎರಡು ದಿನ ಎರಡು ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ.

ಶನಿವಾರ ಬೆಳಿಗ್ಗೆ 10 ಗಂತೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರಧಾನಿ ಮೋದಿ ಮೊದಲ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಭಾನುವಾರ ಬೆಳಿಗ್ಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಲು ಉದ್ದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 6 ರಂದು ಸಿ.ವಿ. ರಾಮನ್ ನಗರದಿಂದ ಬ್ರಿಗೇಡ್ ರಸ್ತೆಯ ವಾರ್ ಮೆಮೋರಿಯಲ್ ವರೆಗೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ ರೋಡ್ ಶೋ ಆರಂಭವಾಗಲಿದೆ.

ಇನ್ನು ಭಾನುವಾರ ಮೇ 7ರಂದು ಬೆಳಿಗ್ಗೆ ಸುಮಾರು 28 ಕಿ.ಮೀ. ವರೆಗೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಜೆ.ಪಿ.ನಗರದ ಆರ್ ಬಿ ಐ ರೋಡ್ ನಿಂದ ಆರಂಭವಾಗಿ ಬೊಮ್ಮನಹಳ್ಳಿ, ಜೆ.ಪಿ. ನಗರ, ಜಯನಗರ, ಅರಬಿಂದೋ ಮಾರ್ಗ, ಕೂಲ್ ಜಾಯಿಂಟ್, ಮಯ್ಯಾಸ್, ಕರಿಸಂದ್ರ, ಸೌತ್ ಎಂಡ್ ಸರ್ಕಲ್, ನೆಟ್ಟಕಲ್ಲಪ್ಪ ಸರ್ಕಲ್, ಎನ್ ಆರ್ ಕಾಲೋನಿ, ಬಸವನಗುಡಿ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್, ಟಿ.ಆರ್ ಮಿಲ್, ಸಿರ್ಸಿ ಸರ್ಕಲ್, ಈಟಾ ಮಾಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ವೆಸ್ಟ್ ಆಫ್ ಕಾರ್ಡ್ ರೋಡ್, ಮೋದಿ ಆಸ್ಪತ್ರೆ, ನವರಂಗ್ ಸರ್ಕಲ್, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಮಾರಮ್ಮ ದೇವಸ್ಥಾನದವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿರಲಿದ್ದು, ಬದಲಿ ಮಾರ್ಗಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular