ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಮೇ 8 ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಮುಖ್ಯಾಧಿಕಾರಿ ಮನೋಜ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 8 ರಂದು ಸಂಜೆ 6 ಗಂಟೆವರೆಗೆ ಮಾತ್ರ ಅವಕಾಶವಿದೆ. ಮೇ 8ರ ಸಂಜೆ 6 ಗಂಟೆ ನಂತರ ಅಭ್ಯರ್ಥಿಗಳು ಮಾತ್ರ ಮನೆ ಮನೆ ಪ್ರಚಾರ ಕೈಗೊಳ್ಳಬಹುದಾಗಿದೆ ಎಂದರು,
ಬೆಂಗಳೂರಿನಲ್ಲಿ ಮೇ 6, 7 ರಂದು ಪ್ರಧಾನಿ ಮೋದಿ ಅವರ ರೋಡ್ ಶೋಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.