ಯಾದಗಿರಿ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಮದ್ದರಕಿ ಗ್ರಾಮದ ಬಳಿ ನಡೆದಿದೆ.
ನಾಗರಾಜ್ ಸಜ್ಜನ್(59), ಮಹಾದೇವಿ(50), ರೇಣುಕಾ(45) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾಗಿದ್ದಾರೆ. ಮೃತ ನಾಗರಾಜ್ ಸಜ್ಜನ್ ಕೃಷಿ ಇಲಾಖೆ ಅಧಿಕಾರಿಯಾಗಿದ್ದಾರೆ. ಕಲಬುರ್ಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ವಾಪಸ್ ತೆರಳುವ ವೇಳೆ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.