HomeKarnatakaBIG NEWS: ಬಿಜೆಪಿ ನಾಯಕರ ಅಸಮಾಧಾನಕ್ಕೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್ ಕುಮಾರ್

BIG NEWS: ಬಿಜೆಪಿ ನಾಯಕರ ಅಸಮಾಧಾನಕ್ಕೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ವರುಣಾದಲ್ಲಿ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ ವಿಚಾರವಾಗಿ ಸ್ವತಃ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಸಚಿವ ವಿ. ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಇಬ್ಬರೂ ನನಗೆ ಒಳ್ಳೆಯ ಆಪ್ತರು. ಅವರ ಬಗ್ಗೆ ನನಗೆ ಗೌರವವಿದೆ. ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಸಿದ್ದರಾಮಯ್ಯ ಎದುರಾಳಿ ಯಾರು ಎಂಬುದನ್ನೇ ನಾನು ಈವರೆಗೆ ಕೇಳಿಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿ. ಸೋಮಣ್ಣ ಕರೆದರೆ ಅವರ ಪರವೂ ಪ್ರಚಾರ ಮಾಡುತ್ತೇನೆ. ಬಿಜೆಪಿ ನಾಯಕರಾರೂ ನನ್ನನ್ನು ಸಂಪರ್ಕಿಸಿಲ್ಲ. ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular