HomeIndiaBREAKING NEWS: NCP ಮುಖ್ಯಸ್ಥ ಶರದ್ ಪವಾರ್ ಅಚ್ಚರಿ ನಿರ್ಧಾರ: ರಾಜೀನಾಮೆ ವಾಪಸ್ ಘೋಷಣೆ

BREAKING NEWS: NCP ಮುಖ್ಯಸ್ಥ ಶರದ್ ಪವಾರ್ ಅಚ್ಚರಿ ನಿರ್ಧಾರ: ರಾಜೀನಾಮೆ ವಾಪಸ್ ಘೋಷಣೆ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಶರದ್ ಪವಾರ್ ಶುಕ್ರವಾರ ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ನಾನು ನನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಮ್ಮ ಭಾವನೆಗಳನ್ನು ನಾನು ಗೌರವಿಸದ ಇರಲಾರೆ. ನಿಮ್ಮ ಪ್ರೀತಿಯಿಂದಾಗಿ ನನ್ನ ರಾಜೀನಾಮೆಯನ್ನು ಹಿಂಪಡೆಯುತ್ತಿದ್ದೇನೆ. ರಾಜೀನಾಮೆ ವಾಪಸ್ ಪಡೆಯಲು ನನಗೆ ಬೇಡಿಕೆ ಇಡಲಾಗಿತ್ತು. ಎನ್‌ಸಿಪಿಯ ಹಿರಿಯ ನಾಯಕರು ಅಂಗೀಕರಿಸಿದ ನಿರ್ಣಯವನ್ನು ನಾನು ಗೌರವಿಸುತ್ತೇನೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ನಾನು ಹಿಂಪಡೆಯುತ್ತೇನೆ ಎಂದು ಶರದ್ ಪವಾರ್ ಘೋಷಿಸಿದ್ದಾರೆ,

ಮುಂದಿನ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲು ರಚಿಸಲಾದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಸಮಿತಿಯು ಶರದ್ ಪವಾರ್ ಅವರ ಪದತ್ಯಾಗದ ನಿರ್ಧಾರವನ್ನು ಸರ್ವಾನುಮತದಿಂದ ತಿರಸ್ಕರಿಸಿದೆ. ಇದಾದ ನಂತರ ಶರದ್ ಪವಾರ್ ನಿರ್ಧಾರ ಬದಲಿಸಿ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವುದಾಗಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular