HomeIndiaಒಂದೇ ಒಂದು ಪೈಸೆ ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಕಂಡು ಬಂದರೆ ನನ್ನನ್ನು ಗಲ್ಲಿಗೇರಿಸಿ: ಪ್ರಧಾನಿ ಮೋದಿಗೆ...

ಒಂದೇ ಒಂದು ಪೈಸೆ ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಕಂಡು ಬಂದರೆ ನನ್ನನ್ನು ಗಲ್ಲಿಗೇರಿಸಿ: ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಸವಾಲ್

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆಗಳು ನನ್ನನ್ನು ಕಳ್ಳ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದು, ನನ್ನ ವಿರುದ್ಧ ಒಂದು ಪೈಸೆಯಷ್ಟು ಭ್ರಷ್ಟಾಚಾರ ಕಂಡುಬಂದರೆ ಸಾರ್ವಜನಿಕವಾಗಿ ಗಲ್ಲಿಗೇರಿಸಬಹುದು ಎಂದು ಪ್ರಧಾನಿಗೆ ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಏಪ್ರಿಲ್ 16 ರಂದು ಸಿಬಿಐ ಪ್ರಶ್ನಿಸಿದ್ದು, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ಏಜೆನ್ಸಿ ಕೇಜ್ರಿವಾಲ್ ಅವರನ್ನು ಸಾಕ್ಷಿಯಾಗಿ ಸಮನ್ಸ್ ಮಾಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಬಿಐ, ಇಡಿ, ಆದಾಯ ತೆರಿಗೆ ಮತ್ತು ಪೊಲೀಸರಿಗೆ ಕೇಜ್ರಿವಾಲ್ ಒಬ್ಬ ಕಳ್ಳ ಎಂದು ಸಾಬೀತುಪಡಿಸುವ ಉದ್ದೇಶವಿದೆ. ಕೇಜ್ರಿವಾಲ್ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸಾಬೀತುಪಡಿಸುವುದು ಅವರ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ನಾನು ಮೋದಿಜಿಗೆ ಹೇಳಲು ಬಯಸುತ್ತೇನೆ, ನೀವು ಕೇಜ್ರಿವಾಲ್ ವಿರುದ್ಧ ಒಂದೇ ಒಂದು ಪೈಸೆಯ ಭ್ರಷ್ಟಾಚಾರವನ್ನು ಕಂಡುಕೊಂಡ ದಿನ ನನ್ನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ. ನಿಮ್ಮ ನಾಟಕ ನಿಲ್ಲಿಸಿ ಎಂದು ಕೇಜ್ರಿವಾಲ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular