HomeKarnatakaಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಆರೋಪದಡಿ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಎರಡು ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಲಖ್ಯಾ ಸಮೀಪ ನಗರಸಭೆ ಸದಸ್ಯ ಲಕ್ಷ್ಮಣ್ ಅವರಿಗೆ ಸೇರಿದ ಜಮೀನಿನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 90 ಬಾಕ್ಸ್ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿತ್ತು. ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯ ವಶಕ್ಕೆ ಪಡೆದುಕೊಂಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಶುಕ್ರವಾರ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular