ಬೆಂಗಳೂರು: ಗುರುವಾರ ರಾಜ್ಯದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 5.38 ಕೋಟಿ ರೂಪಾಯಿ ನಗದು ಸೇರಿದಂತೆ 9.21 ಕೋಟಿ ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ.
ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯ ಮನೋಜ್ ಕುಮಾರ್ ಮೀನಾ ಈ ಕುರಿತು ಮಾಹಿತಿ ನೀಡಿದ್ದು, 2.84 ಕೋಟಿ ರೂಪಾಯಿ ಮೌಲ್ಯದ 45, 170 ಲೀಟರ್ ಮದ್ಯ, 91.48 ಲಕ್ಷದ 86.99 ಕೆಜಿ ಮಾದಕ ವಸ್ತು, 7.12 ಲಕ್ಷ ರೂಪಾಯಿ ಮೌಲ್ಯದ ಉಚಿತ ಕೊಡುಗೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಚುನಾವಣೆ ನೀತಿ ಸಮಿತಿ ಜಾರಿಯಾದಾಗಿನಿಂದ ಇದುವರೆಗೆ ಒಟ್ಟು 340.23 ಕೋಟಿ ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ. 2672 ಚುನಾವಣೆ ಅಕ್ರಮ ಆರೋಪದ ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಅಬಕಾರಿ ಕಾಯ್ದೆ ಉಲ್ಲಂಘನೆ ಆರೋಪದಡಿ 38,000ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.