HomeKarnatakaಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ವಿಚಾರ; ಸಿಎಂ ಪ್ರತಿಕ್ರಿಯೆ

ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ವಿಚಾರ; ಸಿಎಂ ಪ್ರತಿಕ್ರಿಯೆ

ಕಲಬುರ್ಗಿ: ಖರ್ಗೆ ಕುಟುಂಬದವರನ್ನು ಸಾಪ್ ಮಾಡುತ್ತೇನೆ ಎಂಬ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಣಿಕಂಠ ರಾಠೋಡ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ವಿಚಾರವಾಗಿ, ಆಡಿಯೋ ತಿರುಚಲಾಗಿದೆಯೋ ಏನು ಎಂಬುದನ್ನು ನೋಡಬೇಕು. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಿಯಾಂಕ್ ಖರ್ಗೆ ಹೆಂಡತಿ ಮಕ್ಕಳನ್ನು ಸಾಪ್ ಮಾಡುತ್ತೇನೆ, ನನ್ನ ಬಳಿ ಅವರ ನಂಬರ್ ಇದ್ದಿದ್ದರೆ ಅವರ ಹೆಂಡತಿ ಮಕ್ಕಳನ್ನು ಸಾಪ್ ಮಾಡುತ್ತೇನೆ ಎಂದು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿದ್ದಾರೆ ಎಂಬ ಆಡಿಯೋ ಭಾರಿ ವೈರಲ್ ಆಗಿದೆ.

For Latest News Updates, Join Our Whatsapp Community🚩
RELATED ARTICLES

Most Popular