HomeIndiaSHOCKING: ಮನೆಗೆ ನುಗ್ಗಿ ಪೋಷಕರಿಗೆ ಥಳಿಸಿ ಹುಡುಗಿ ಮೇಲೆ ಗ್ಯಾಂಗ್ ರೇಪ್

SHOCKING: ಮನೆಗೆ ನುಗ್ಗಿ ಪೋಷಕರಿಗೆ ಥಳಿಸಿ ಹುಡುಗಿ ಮೇಲೆ ಗ್ಯಾಂಗ್ ರೇಪ್

ಭೋಪಾಲ್: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಬಾಲಕಿ ಮನೆಗೆ ನುಗ್ಗಿದ ಐವರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆಕೆಯ ಪೋಷಕರನ್ನು ಬರ್ಬರವಾಗಿ ಥಳಿಸಿದ್ದಾರೆ.

ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಗಳು ಮಷಿನ್ ಕ್ರಷರ್‌ನ ಬೆಲ್ಟ್‌ ಗಳನ್ನು ಬಳಸಿ ಬಾಲಕಿಯ ಕುಟುಂಬಸ್ಥರಿಗೆ ಥಳಿಸಿದ್ದು ಅವರಿಗೆ ತೀವ್ರ ಗಾಯಗಳಾಗಿವೆ. ಬಾಲಕಿಯ ಕುಟುಂಬಸ್ಥರು ಪ್ರಜ್ಞಾಹೀನರಾಗುತ್ತಿದ್ದಂತೆ ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರಂಭದಲ್ಲಿ, ಪೊಲೀಸರು ಆರೋಪಿಗಳ ವಿರುದ್ಧ ಕಿರುಕುಳದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಭೀಮ್ ಆರ್ಮಿ ಕಾರ್ಯಕರ್ತರ ಪ್ರತಿಭಟನೆಯ ಬೆದರಿಕೆಯ ನಂತರ, ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು. ಐದನೇ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಮೂಲಗಳನ್ನು ಉಲ್ಲೇಖಿಸಿ, ಈ ಘಟನೆಯು ಹುಡುಗಿಯ ಕುಟುಂಬ ಮತ್ತು ಆರೋಪಿಗಳ ನಡುವಿನ ಜಮೀನು ವಿವಾದದ ಹಿನ್ನೆಲೆಯಲ್ಲಿ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳ ಪ್ರಕರಣ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular