HomeKarnatakaಸಂವಿಧಾನ ವಿರೋಧಿ ಬಿಜೆಪಿಗೆ ಆಶೀರ್ವಾದ ಮಾಡಬೇಡಿ, ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

ಸಂವಿಧಾನ ವಿರೋಧಿ ಬಿಜೆಪಿಗೆ ಆಶೀರ್ವಾದ ಮಾಡಬೇಡಿ, ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

ಹುಬ್ಬಳ್ಳಿ: ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ನನ್ನ ಮಗ ರಾಹುಲ್ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿದ್ದಾರೆ. ಕರ್ನಾಟಕದ ಜನತೆ ಬಿಜೆಪಿಗೆ ಆಶೀರ್ವಾದ ಮಾಡಬೇಡಿ. ಮೇ 10 ರಂದು ನಿಮ್ಮ ಅಮೂಲ್ಯವಾದ ಮತ ಕಾಂಗ್ರೆಸ್ ಗೆ ನೀಡಿ. ಜನರ ಆಶೀರ್ವಾದಕ್ಕಿಂತಲೂ ಯಾವುದೂ ದೊಡ್ಡದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸರ್ಕಾರ ಕರ್ನಾಟಕವನ್ನು ಲೂಟಿ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಕರ್ನಾಟಕದಲ್ಲಿ ಅಭಿವೃದ್ಧಿ ಮಾಡಿಲ್ಲ. ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ. ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನೀಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular