ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಹತ್ಯೆ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಈ ಕುರಿತಾಗಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಢೋಡ್ ಅವರು ಕಲಬುರ್ಗಿ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ನವರು ಬಿಡುಗಡೆ ಮಾಡಿರುವ ಆಡಿಯೋ ನಕಲಿಯಾಗಿದೆ ಎಂದು ದೂರು ನೀಡಿದ್ದಾರೆ.
ಅದರಲ್ಲಿರುವ ಧ್ವನಿ ನನ್ನದಲ್ಲ. ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೋಲುವ ಭೀತಿ ಎದುರಾಗಿದೆ. 26 ವರ್ಷದ ಯುವಕ ಗೆಲ್ಲುತ್ತಾನೆ ಎಂದು ಇಂತಹ ಷಡ್ಯಂತ್ರ ಮಾಡಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಆಡಿಯೋ ಬಗ್ಗೆ ತನಿಖೆಗೆ ಮನವಿ ಮಾಡಿದ ಮಣಿಕಂಠ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.