ಕಲಬುರ್ಗಿ: ವಿಧಾನಸಭಾ ಚುನಾವಣೆ ಹೊತ್ತಲ್ಲೇ ಐಟಿ ಅಧಿಕಾರಿಗಳು ರಾಜಕೀಯ ನಾಯಕರ ಮುಖಂಡರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಶಾಸಕ ಪ್ರಿಯಾಂಕ್ ಖರ್ಗೆ ಆಪ್ತ, ಮಾಜಿ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್ ಮನೆ, ಹೋಟೆಲ್ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಲಬುರ್ಗಿಯಲ್ಲಿ ಅರವಿಂದ್ ಚೌಹಾಣ್ ಅವರ ಮನೆ, ಜಲ್ಲಿ ಕ್ರಷರ್, ಹೋಟೆಲ್ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅರವಿಂದ್ ಚೌಹಾಣ್ ಈ ಹಿಂದೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.
ಇನ್ನು ಹಾವೇರಿ ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬ್ಯಾಡಗಿಯ ವಿದ್ಯಾನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.