ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 14 ಸಲ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಇನ್ನಿಲ್ಲ

ಮೈಸೂರು: ದಸರಾ ಆನೆ ಬಲರಾಮ(67) ಮೃತಪಟ್ಟಿದೆ. ಮೈಸೂರು ಜಿಲ್ಲೆ ಹುಣಸೂರು ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆ ಮೃತಪಟ್ಟಿದೆ.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಬಲರಾಮ ಅಂಬಾರಿ ಹೊತ್ತಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಬಲರಾಮ ಆನೆಗೆ ಶಿಬಿರದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಬಲರಾಮ ಆನೆಗೆ ನೀರು, ಆಹಾರ ಸೇವಿಸಲು ಸಾಧ್ಯವಾಗದಂತಹ ಸ್ಥಿತಿ ಉಂಟಾಗಿದ್ದು, ನಾಗರಹೊಳೆ ಪಶು ವೈದ್ಯ ಡಾ. ರಮೇಶ್ ಅವರು ಭೀಮನಕಟ್ಟೆ ಆನೆ ಶಿಬಿರದಲ್ಲಿ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಬ್ಬಂದಿ ಬಲರಾಮನ ಆರೈಕೆ ಮಾಡುತ್ತಿದ್ದರು. ಕಳೆದ 10 ದಿನಗಳಿಂದ ನಿತ್ರಾಣಗೊಂಡಿದ್ದ ಆನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read