ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಲಾದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಪ್ರಸ್ತಾಪ ಮಾಡಿಲ್ಲವೆಂದು ಕಾಂಗ್ರೆಸ್ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.
ಬಜರಂಗದಳ ನಿಷೇಧ ವಿಚಾರವಾಗಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿದ ಕಮಲ್ ನಾಥ್, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಪ್ರಸ್ತಾಪ ಮಾಡಿಲ್ಲ. ಆದರೆ, ಕಾನೂನು ಭಂಗ ಮಾಡುವ ಶಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.