ಮಂಗಳೂರು: ಜನರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಮಾತನಾಡುವುದಿಲ್ಲ. 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನರ ಲೂಟಿಯಾಗಿರುವ ಕುರಿತೂ ಮೌನ ವಹಿಸಿದ್ದಾರೆ. ರೈತರ ಆತ್ಮಹತ್ಯೆ ಬಗ್ಗೆಯೂ ಪ್ರಧಾನಿಯವರು ಮಾತನಾಡಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ಕೊಳ್ನಾಡುವಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಬೆಲೆ ಏರಿಕೆ ನಿರುದ್ಯೋಗದಿಂದಾಗಿ ದೇಶದ ಜನ ಸಂಕಷ್ಟದಲ್ಲಿದ್ದಾರೆ. ಭ್ರಷ್ಟಾಚಾರದಿಂದ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಕರ್ನಾಟಕದಲ್ಲಿ 40% ಕಮಿಷನ್ ಸರ್ಕಾರ ಜನರ ಹಣ ಲೂಟಿ ಮಾಡುತ್ತಿದೆ. ಇವುಗಳ ಬಗ್ಗೆ ಪ್ರಧಾನಿ ಮಾತನ್ನೇ ಆಡುವುದಿಲ್ಲ ಎಂದು ಟೀಕಿಸಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ಆತಂಕವಾದ, ಸುರಕ್ಷತೆ ಬಗ್ಗೆ ಮಾತನಾಡುವ ಮೋದಿ ಅವರು ನಿರುದ್ಯೋಗ, ಬೆಲೆ ಏರಿಕೆ, ರೈತರ ಸಂಕಷ್ಟದ ಬಗ್ಗೆ ಮಾತನಾಡುತ್ತಿಲ್ಲ ಎಂದು ದೂರಿದ್ದಾರೆ.