HomeKarnatakaBIG NEWS: SSLC ಪರೀಕ್ಷಾ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

BIG NEWS: SSLC ಪರೀಕ್ಷಾ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗಿದ್ದು, ಫಲಿತಾಂಶ ಪ್ರಕಟಿಸಲಾಗಿದೆ. ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಆಗಿದ್ದು, ಈ ಬಾರಿ 83.89ರಷ್ಟು ಫಲಿತಾಂಶ ಬಂದಿದೆ.

ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಮಂಡ್ಯ ಎರಡನೇ ಸ್ಥಾನ , ಹಾಸನ 3ನೇ ಹಾಗೂ ಯಾದಗಿರಿ ಜಿಲ್ಲೆ ಕೊನೇ ಸ್ಥಾನ ಪಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಜಿಲ್ಲೆ ಶೇ.96.80
ಮಂಡ್ಯ:ಶೇ.96.74
ಹಾಸನ: ಶೇ.96.68
ಯಾದಗಿರಿ: ಶೇ.75.49ರಷ್ಟು ಫಲಿತಾಂಶ ಪಡೆದಿದೆ.

11 ಗಂಟೆ ಬಳಿಕ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ.

karresults.nic.in
kseab.karnataka.gov.in ನಲ್ಲಿ ಫಲಿತಾಂಶ ನೋಡಬಹುದು. ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ನೊಂದಣಿ ಸಂಖ್ಯೆ ನಮೂದಿಸಬೇಕು.

For Latest News Updates, Join Our Whatsapp Community🚩
RELATED ARTICLES

Most Popular