HomeKarnatakaBIG NEWS: ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಿದ್ದರೆ ದೇಶ ದಿವಾಳಿಯಾಗುತ್ತಿತ್ತು; ಬಿ.ವೈ. ವಿಜಯೇಂದ್ರ ವಾಗ್ದಾಳಿ

BIG NEWS: ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಿದ್ದರೆ ದೇಶ ದಿವಾಳಿಯಾಗುತ್ತಿತ್ತು; ಬಿ.ವೈ. ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಈ ಬಾರಿ ಬಹುಮತಗಳಿಂದ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಶಿಕಾರಿಪುರದಲ್ಲಿ ಬಿಜೆಪಿ ಪರವಾದ ಅಲೆಯಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ವಿಜಯೇಂದ್ರ, ವರ್ಷಗಳ ಕಾಲ ದೇಶದ ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರು. ಆದರೆ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪ್ರಯತ್ನಿಸಿಲ್ಲ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಯಾವ ರೀತಿ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಲಾಯಿತು ಎಂಬುದನ್ನು ಜನರು ನೋಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಪಂಚಕ್ಕೆ ಆರ್ಥಿಕ ಸಂಕಷ್ಟ ಬಂದ ಸಂದರ್ಭದಲ್ಲಿ ರಾಹುಲ್ ಗಾಂಧಿ ಏನಾದರೂ ದೇಶದ ಪ್ರಧಾನಿಯಾಗಿದ್ದರೆ ಪಾಕಿಸ್ತಾನ ಮತ್ತು ಶ್ರೀಲಂಕಾಗಳಿಗಿಂತ ಮೊದಲು ಭಾರತ ದಿವಾಳಿಯಾಗುತ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular