HomeKarnatakaBIG NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ

BIG NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.

ಕಳೆದ ಎರಡು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬೀದಿ ಬದಿ ವ್ಯಾಪಾರಿಗಳು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ, ಗಿರಿನಗರ, ನಾಗರಬಾವಿ, ಶಾಂತಿನಗರ, ಕಲಾಸಿಪಾಳ್ಯ, ಮೆಜೆಸ್ಟಿಕ್, ರಾಜಾಜಿನಗರ, ಜಯನಗರ, ವಿಜಯನಗರ, ಚಂದ್ರಾಲೇಔಟ್, ನಂದಿನಿ ಲೇಔಟ್, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಆರ್.ಟಿ. ನಗರ, ಮತ್ತಿಕೆರೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular