ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 147 ಕೋಟಿ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. 375 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದೆ.
ಒಟ್ಟು 147 ಕೋಟಿ ರೂಪಾಯಿ ನಗದನ್ನು ಐಟಿ ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ. ಅಕ್ರಮವಾಗಿ ಹಣ ಸಂಗ್ರಹಿಸಿದ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಐಟಿ ಇಲಾಖೆಯಿಂದ 100ಕ್ಕೂ ಅಧಿಕ ಕಡೆ ದಾಳಿ ನಡೆಸಿ 42 ಕೋಟಿ ರೂ. ನಗದು ಜಪ್ತಿ ಮಾಡಲಾಗಿದೆ. ವಿಜಿಲೆನ್ಸ್ ಚೆಕ್ ಪೋಸ್ಟ್ ಗಳಲ್ಲಿ 105 ಕೋಟಿ ರೂಪಾಯಿ ಹಣ ಸೀಜ್ ಮಾಡಲಾಗಿದೆ.
ಚಿನ್ನ, ಬೆಳ್ಳಿ ಆಭರಣ ಸೇರಿದಂತೆ 375 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 96.59 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ, ಸೀರೆ, ಕುಕ್ಕರ್ ಸೇರಿ 24.21 ಕೋಟಿ ರೂ. ಮೌಲ್ಯದ ಹಲವು ಬಗೆಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 83 ಕೋಟಿ ರೂ.ಗೂ ಅಧಿಕ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ.