BIG NEWS: ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ ಅದ್ಕೆ ಸಿದ್ದರಾಮಯ್ಯ ಹೆಸರಲ್ಲಿ ನನ್ನ ವಿರುದ್ಧ ಪತ್ರ ಬರೆದಿದ್ದಾರೆ ಎಂದ ಡಿಕೆಶಿ

ಬೆಂಗಳೂರು: ಬಿಜೆಪಿ ನಾಯಕರು ತಮ್ಮಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ನಕಲಿ ಪತ್ರಗಳನ್ನು ಬರೆದು ಹಂಚುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿಯವರಿಗೆ ಸೋಲಿನ ಭೀತಿ ಶುರುವಾಗಿದೆ. ಅವರಿಗೆ ಮಾಡಲು ಕೆಲಸವಿಲ್ಲ. ಅದ್ಕೆ ಸಿದ್ದರಾಮಯ್ಯ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ ಬರೆದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಯಾಕೆ ನನ್ನ ವಿರುದ್ಧ ಪತ್ರ ಬರೆಯುತ್ತಾರೆ ? ಸಿದ್ದರಾಮಯ್ಯನವರಿಗೆ ಅವರ ಕ್ಷೇತ್ರದಲ್ಲಿ ಜನರ ಬಳಿ ಪ್ರಚಾರ ಮಾಡಲು ಸಮಯ ಸಿಗುತ್ತಿಲ್ಲ, ಇನ್ನು ನನ್ನ ವಿರುದ್ಧ ಪತ್ರ ಬರೆದು ದೂರಲು ಹೇಗೆ ಸಾಧ್ಯ ? ನಾವಿಬ್ಬರೂ ಒಟ್ಟಿಗೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಿದ್ದೇವೆ. ಮೊನ್ನೆಯಷ್ಟೇ ನಾವಿಬ್ಬರೂ ಅಭಿಪ್ರಾಯ ಹಂಚಿಕೊಂಡಿದ್ದೇವೆ. ಹೀಗಿರುವಾಗ ಈ ರೀತಿ ಪತ್ರ ಬರೆಯಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಇದು ಬಿಜೆಪಿ ನಾಯಕರು ಮಾಡುತ್ತಿರುವ ಅಪಪ್ರಚಾರ ಅಷ್ಟೇ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read