ಪರಸ್ತ್ರೀಯೊಂದಿಗೆ ಸ್ಕೂಟರ್‌ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಫಜೀತಿ; ಟ್ರಾಫಿಕ್‌ ಉಲ್ಲಂಘನೆ ನೋಟೀಸ್‌ ನಲ್ಲಿದ್ದ ಫೋಟೋ ನೋಡಿ ಪತ್ನಿ ದೂರು

ಕೇರಳದ ರಸ್ತೆಗಳಲ್ಲಿ ಅಳವಡಿಸಲಾಗಿರುವ ರಸ್ತೆ ಸುರಕ್ಷತಾ ಕ್ಯಾಮೆರಾಗಳು ರಾಜ್ಯ ಸರ್ಕಾರಕ್ಕೆ ಮಾತ್ರವಲ್ಲದೆ ಹೆಲ್ಮೆಟ್ ಧರಿಸದೆ ತನ್ನ ಮಹಿಳಾ ಸ್ನೇಹಿತೆಯೊಂದಿಗೆ ಸ್ಕೂಟರ್‌ನಲ್ಲಿ ಪ್ರಯಾಣಿಸಿದ ವ್ಯಕ್ತಿಗೂ ತಲೆನೋವನ್ನುಂಟುಮಾಡಿದೆ. ಈ ಪ್ರಕರಣದಲ್ಲಿ ವ್ಯಕ್ತಿಯ ವಿರುದ್ಧ ಕೇಸ್ ದಾಖಲಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯ ವಿವರಗಳನ್ನು ಅತ್ಯಾಧುನಿಕ ಕ್ಯಾಮೆರಾಗಳಿಂದ ತೆಗೆದ ಫೋಟೋಗಳ ಸಮೇತ ಕಳಿಸಿದ್ದು ಇದು ಓರ್ವ ವ್ಯಕ್ತಿಯ ಜೀವನದಲ್ಲಿ ಸಮಸ್ಯೆ ಸೃಷ್ಟಿಯಾಗುವಂತಾಗಿದೆ. ಪರಸ್ತ್ರೀಯೊಂದಿಗೆ ಗಂಡ ಪ್ರಯಾಣ ಮಾಡ್ತಿದ್ದ ಫೋಟೋ ನೋಡಿದ ಮಹಿಳೆ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ.

ಇಡುಕ್ಕಿ ಮೂಲದ ವ್ಯಕ್ತಿ, ಏಪ್ರಿಲ್ 25 ರಂದು ಹೆಲ್ಮೆಟ್ ಧರಿಸದೆ ನಗರದ ರಸ್ತೆಗಳಲ್ಲಿ ತನ್ನ ಸ್ನೇಹಿತೆಯೊಂದಿಗೆ ಸ್ಕೂಟರ್‌ನಲ್ಲಿ ಸವಾರಿ ಮಾಡಿದ್ದ.

ವಾಹನದ ನೋಂದಣಿ ಪ್ರಮಾಣ ಪತ್ರದ ಪ್ರಕಾರ ಪತ್ನಿಯೇ ವಾಹನದ ಮಾಲೀಕರಾಗಿರುವುದರಿಂದ ವ್ಯಕ್ತಿಯಿಂದ ಸಂಚಾರ ನಿಯಮ ಉಲ್ಲಂಘನೆಯ ವಿವರ ಹಾಗೂ ಪಾವತಿಸಬೇಕಾದ ದಂಡದ ವಿವರವನ್ನು ಆಕೆಯ ಮೊಬೈಲ್ ಫೋನ್‌ಗೆ ಸಂದೇಶ ಕಳುಹಿಸಲಾಗಿತ್ತು. ಸಂದೇಶವನ್ನು ಸ್ವೀಕರಿಸಿದಾಗ, ಫೋಟೋದಲ್ಲಿ ಸ್ಕೂಟರ್ ನಲ್ಲಿ ಹಿಂಬದಿ ಕುಳಿತು ಪ್ರಯಾಣ ಮಾಡುತ್ತಿದ್ದ ಮಹಿಳೆ ಯಾರು ಎಂದು ಪತ್ನಿ ಪತಿಯನ್ನು ಪ್ರಶ್ನಿಸಿದ್ದಾರೆ.

ಜವಳಿ ಅಂಗಡಿಯೊಂದರ ಉದ್ಯೋಗಿಯಾಗಿರುವ 32 ವರ್ಷದ ವ್ಯಕ್ತಿ ತನಗೂ ಆ ಮಹಿಳೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಕೂಟರ್‌ನಲ್ಲಿ ಲಿಫ್ಟ್ ಕೊಟ್ಟಿದ್ದಾಗಿ ಹೇಳಿಕೊಂಡರೂ ಪತ್ನಿ ನಂಬಲಿಲ್ಲ. ಇದು ದಂಪತಿ ನಡುವೆ ವಾಗ್ವಾದಕ್ಕೆ ಕಾರಣವಾಯಿತು.

ಮೇ 5 ರಂದು ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಪತಿ ತನ್ನ ಮತ್ತು ಮೂರು ವರ್ಷದ ಮಗುವನ್ನು ಅಮಾನುಷವಾಗಿ ನಡೆಸಿಕೊಂಡಿದ್ದಾನೆ ಎಂದು ಆರೋಪಿಸಿದ್ದಾಳೆ.

ಆಕೆಯ ಹೇಳಿಕೆ ಆಧರಿಸಿ ಆತನನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ವ್ಯಕ್ತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಸ್ತೆ ಸುರಕ್ಷತಾ ಯೋಜನೆ ‘ಸೇಫ್ ಕೇರಳ’ ಭಾಗವಾಗಿ ರಾಜ್ಯದ ರಸ್ತೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುವ ಕುರಿತು ಕೇರಳ ತೀವ್ರ ರಾಜಕೀಯ ಗದ್ದಲಕ್ಕೆ ಸಾಕ್ಷಿಯಾಗಿದೆ.

ಕ್ಯಾಮೆರಾಗಳ ಅಳವಡಿಕೆಗೆ ಸಂಬಂಧಿಸಿದ ಒಪ್ಪಂದಗಳ ಕುರಿತು ಎಲ್‌ಡಿಎಫ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read