ಮೈಸೂರು: ನಾನು ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರಾವಳಿ ಭಾಗದಲ್ಲಿ ಈ ಬಾರಿ ಕಾಂಗ್ರೆಸ್ ಸೀಟು ಹೆಚ್ಚಾಗಲಿದೆ. ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ, ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದರು.
ಈ ಬಾರಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. 130-150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು.