HomeKarnatakaBIG NEWS: ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧರಾಗಿದ್ದೇವೆ; 130 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ...

BIG NEWS: ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧರಾಗಿದ್ದೇವೆ; 130 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಮಾಜಿ ಡಿಸಿಎಂ ಜಿ. ಪರಮೇಶ್ವರ್

ತುಮಕೂರು: ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧತೆ ನಡೆಸಿದ್ದೇವೆ ಎಂದು ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ಸಿ ಎಲ್ ಪಿ ಅಭಿಪ್ರಾಯ ಸಂಗ್ರಹಿಸಿ ಸಿಎಂ ಬಗ್ಗೆ ತೀರ್ಮಾನ ಮಾಡುತ್ತೇವೆ. ಉತ್ತಮ ಆಡಳಿತ ಕೊಡುವವರನ್ನು ಮುಖ್ಯಮಂತ್ರಿ ಮಾಡ್ತಾರೆ. ಹೈಕಮಾಂಡ್ ನನ್ನ ಸಿಎಂ ಮಾಡಿದರೆ ಬೇಡ ಅನ್ನೋಕೆ ಆಗುತ್ತಾ? ಅಭಿಮಾನಿಗಳ ಅಪೇಕ್ಷೆ ಇದೆ ಎಂದ ತಕ್ಷಣ ಸಾಧ್ಯವಾಗುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಹುದ್ದೆ ಆಕಾಂಕ್ಷೆ ವ್ಯಕ್ತಪಡಿಸಿದರು.

ತುಮಕೂರಿನಲ್ಲಿ ಕಾಂಗ್ರೆಸ್ 6-7 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ. ನಾವು ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧತೆ ನಡೆಸಿದ್ದೇವೆ. 2013ರಲ್ಲಿ ನಾನು 120 ಸ್ಥಾನ ಬರುವ ಮುನ್ಸೂಚನೆ ನೀಡಿದ್ದೆ. ಆದರೆ ನಾವು 122 ಸ್ಥಾನಗಳನ್ನು ಗೆದ್ದಿದ್ದೆವು. ಈಗ ನಾವು 130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular