HomeKarnatakaBIG NEWS: ಕೆ.ಎಸ್. ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ

BIG NEWS: ಕೆ.ಎಸ್. ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಈ ಬಾರಿ ಅತಂತ್ರ ಫಲಿತಾಂಶ ಬರಲಿದೆ ಎಂದು ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಸರ್ಕಾರ ರಚನೆಯಲ್ಲಿ ಜೆಡಿಎಸ್ ಪ್ರಮುಖ ಪಾತ್ರ ನಿರ್ವಹಿಸಲಿದೆ. ಶಿವಮೊಗ್ಗದಲ್ಲಿ ಜೆಡಿಎಸ್ ಗೆದ್ದು ಇತಿಹಾಸ ನಿರ್ಮಿಸಲಿದೆ. ಶಾಂತಿ ಸೌಹಾರ್ದತೆ, ಅಭಿವೃದ್ಧಿ ಮೇಲೆ ಚುನಾವಣೆ ಮಾಡಿದ್ದೇವೆ. ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನನಗೆ ಸಹಾಯ ಮಾಡಿದ್ದಾರೆ ಎಂದರು.

ಈ ಬಾರಿ ಹೊಸ ಇತಿಹಾಸದ ಪುಟ ತೆರೆಯುವ ವಿಶ್ವಾಸವಿದೆ. ಬಿ ಎಸ್ ವೈ ಅವರನ್ನು ಜಾತಿಗೆ ಸೀಮಿತ ಮಾಡಿ ಅಪಚಾರ ಮಾಡಿದ್ದಾರೆ. ಕೆ.ಎಸ್. ಈಶ್ವರಪ್ಪಗೆ ಯಾವುದೇ ಸಾಮರ್ಥ್ಯವಿಲ್ಲ, ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸುವ ಶಕ್ತಿಯೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular