ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ.
ಧಾರಾಕಾರ ಮಳೆಯಿಂದಾಗಿ ಚಿಕ್ಕಮಗಳೂರಿನ ಬೀರನಹಳ್ಳಿ-ಅಜ್ಜನಹಟ್ಟಿ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಬೀರನಹಳ್ಳಿಯಲ್ಲಿ ಜಮೀನುಗಳಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.