HomeKarnatakaBIG NEWS: ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಕರೆ ಮಾಡಿದ ಸಿಎಂ ಬೊಮ್ಮಾಯಿ; ಗರಿಗೆದರಿದ...

BIG NEWS: ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಕರೆ ಮಾಡಿದ ಸಿಎಂ ಬೊಮ್ಮಾಯಿ; ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ರ‍ಂಭವಾಗಿದ್ದು, ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿವೆ. ಫಲಿತಾಂಶಕ್ಕೂ ಮುನ್ನವೇ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರಿಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಮುಂದಿನ ರಾಜಕೀಯ ರಣತಂತ್ರ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೆಲ ಪಕ್ಷೇತರ ಅಭ್ಯರ್ಥಿಗಳಿಗೆ ಸ್ವತ; ತಾವೆ ಕರೆ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿ.ಎಂ.ಪಿ.ಪ್ರಕಾಶ್ ಅವರ ಪುತ್ರಿ, ಹರಪನಹಳ್ಳಿ ಪಕ್ಷೇತರ ಅಭ್ಯರ್ಥಿ ಎಂ.ಪಿ ಲತಾ ಮಲ್ಲಿಕಾರ್ಜುನ ಅವರಿಗೆ ಫೋನ್ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪಕ್ಷೇತರ ಅಭ್ಯರ್ಥಿಯಾಗಿದ್ದರೂ ನಿಮಗೆ ಒಳ್ಳೆಯ ಹೆಸರಿದೆ ಎಂದು ಹೇಳಿದ್ದಾರೆ. ಈ ಮೂಲಕ ಅತಂತ್ರ ಫಲಿತಾಂಶ ಬಂದಲ್ಲಿ ಬಿಜೆಪಿಗೆ ಬೆಂಬಲಿಸುವಂತೆ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular