HomeKarnatakaಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರು ಸಾವು

ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳಿಹಳ್ಳಿ ಗರಗ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಮೈತ್ರಾದೇವಿ(80), ಸೌಜನ್ಯಾ(48) ಅಮೃತಪಟ್ಟವರು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರು ದಾವಣಗೆರೆಯ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದಾವಣಗೆರೆಯಲ್ಲಿ ಸಂಬಂಧಿಕರ ಮನೆಗೆ ಹೋಗಿದ್ದ ಇವರು ಸಕಲೇಶಪುರದ ಬಾಳೆಪೇಟೆಗೆ ವಾಪಸ್ ಕಾರ್ ನಲ್ಲಿ ತೆರಳುವಾಗ ಗುಳ್ಳಿಹಳ್ಳಿ ಗರಗ ರಸ್ತೆಯಲ್ಲಿ ಎದುರಿಗೆ ಲಾರಿ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಗುರುದತ್ತ ಮತ್ತು ಅವರ ಪುತ್ರ ರಾಜೇಶ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular