
ಇಂದು ನಡೆದ ಮತ ಎಣಿಕೆಯಲ್ಲಿ ಲಕ್ಷ್ಮಣ ಸವದಿ ತಮ್ಮ ಎದುರಾಳಿ ಮಹೇಶ್ ಕುಮಟಳ್ಳಿ ಅವರಿಗಿಂತ ಸಾವಿರಕ್ಕೂ ಅಧಿಕ ಮತಗಳ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.
ತಮ್ಮ ಆಪ್ತ ಮಹೇಶ್ ಕುಮಟಳ್ಳಿ ಅವರಿಗೇ ಬಿಜೆಪಿ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದು ಗಿಟ್ಟಿಸಿಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೂ ಗೋಕಾಕ್ ಕ್ಷೇತ್ರದಲ್ಲಿ ಆರಂಭಿಕ ಹಿನ್ನಡೆಯಾಗಿದೆ ಎಂದು ತಿಳಿದು ಬಂದಿದೆ.

