BIG NEWS: ಸಹೋದರನ ವಿರುದ್ಧ ಮುನ್ನಡೆ ಸಾಧಿಸಿದ ಪಕ್ಷೇತರ ಅಭ್ಯರ್ಥಿ ನಿತಿನ್ ಗುತ್ತೇದಾರ್

Independent candidate may play spoilsport in Afzalpur - The Hinduಅಫ್ಜಲ್ಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಿತಿನ್ ಗುತ್ತೇದಾರ್ ಕೊನೆಗೂ ತಮ್ಮ ಹಿರಿಯ ಸಹೋದರ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸಹೋದರನಿಗೆ ಸೆಡ್ಡು ಹೊಡೆದಿದ್ದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರೂ ಆಗಿರುವ ನಿತಿನ್ ಗುತ್ತೇದಾರ್ ಆರು ಬಾರಿ ಕ್ಷೇತ್ರದ ಶಾಸಕರಾಗಿರುವ ಸಹೋದರ ಮಾಲಿಕಯ್ಯ ಗುತ್ತೇದಾರ್ ಈ ಬಾರಿ ಕ್ಷೇತ್ರವನ್ನು ತಮಗೆ ಬಿಟ್ಟು ಕೊಡಬಹುದು ಎಂಬ ನಿರೀಕ್ಷೆ ಹೊಂದಿದ್ದರು.

ಯಾವಾಗ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಯಿತೋ ಆಗ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್ ಕಣಕ್ಕಿಳಿದಿದ್ದು, ಇಂದು ನಡೆಯುತ್ತಿರುವ ಮತ ಎಣಿಕೆಯಲ್ಲಿ ಅವರು ತಮ್ಮ ಸಹೋದರ ಮಾಲೀಕಯ್ಯ ಗುತ್ತೇದಾರ್ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read