HomeKarnatakaBIG BREAKING: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ HDK ವಾಸ್ತವ್ಯ; ಹೋಟೆಲ್ ನತ್ತ ದೌಡಾಯಿಸಿದ...

BIG BREAKING: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ HDK ವಾಸ್ತವ್ಯ; ಹೋಟೆಲ್ ನತ್ತ ದೌಡಾಯಿಸಿದ ಬಿಜೆಪಿ ನಾಯಕರು

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಾಣಿಸುತ್ತಿವೆ.

ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಇತ್ತ ಬಿಜೆಪಿ ಪಾಳೆಯದಲ್ಲೂ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಸಿಂಗಾಪುರದಿಂದ ಮರಳಿ ಬೆಂಗಳೂರಿಗೆ ಬಂದಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ತಾಜ್ ವೆಸ್ಟ್ ಎಂಡ್ ಡ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದು, ಅವರನ್ನು ಭೇಟಿ ಮಾಡಲು ಬಿಜೆಪಿ ನಾಯಕರು ಹೋಟೆಲ್ ನತ್ತ ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪೂರ್ಣ ಫಲಿತಾಂಶ ಬರಲು ಇನ್ನೂ ಅಧಿಕ ಸಮಯವಿರುವುದರಿಂದ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸಲು ಬಿಜೆಪಿ ನಾಯಕರು ಲೆಕ್ಕಾಚಾರ ಹಾಕುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular