HomeKarnatakaಕರ್ನಾಟಕ ವಿಧಾನಸಭೆ ಫಲಿತಾಂಶ: ಮುಂಜಾನೆಯೇ ದೇಗುಲಕ್ಕೆ ಭೇಟಿ ನೀಡಿ ಪ್ರಿಯಾಂಕಾ ಗಾಂಧಿ ಪೂಜೆ

ಕರ್ನಾಟಕ ವಿಧಾನಸಭೆ ಫಲಿತಾಂಶ: ಮುಂಜಾನೆಯೇ ದೇಗುಲಕ್ಕೆ ಭೇಟಿ ನೀಡಿ ಪ್ರಿಯಾಂಕಾ ಗಾಂಧಿ ಪೂಜೆ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಗೆಲುವಿನತ್ತ ಮುನ್ನಡೆ ಸಾಧಿಸ್ತಿದ್ರೆ, ಅತ್ತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ.

ಇಂದು ಬೆಳಗ್ಗೆ ಕರ್ನಾಟಕದಲ್ಲಿ ಮತ ಎಣಿಕೆ ನಡೆಯುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಮ್ಲಾದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಿಯಾಂಕಾ ಗಾಂಧಿ ಅವರು ಶಿಮ್ಲಾದ ಜಖುವಿನ ಹನುಮಾನ್ ದೇವಸ್ಥಾನದಲ್ಲಿ “ದೇಶ ಮತ್ತು ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದಾರೆ” ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆಯಲ್ಲಿದೆ. ಈಗಾಗಲೇ ಬಹುಮತದ ಸಂಖ್ಯೆಯನ್ನು ದಾಟಿದ್ದು ಪೂರ್ಣಪ್ರಮಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆಯಿದೆ.

For Latest News Updates, Join Our Whatsapp Community🚩
RELATED ARTICLES

Most Popular