BIG NEWS: ಕಾಂಗ್ರೆಸ್ ಭರ್ಜರಿ ಗೆಲುವಿಗೆ ಡಿ.ಕೆ. ಶಿವಕುಮಾರ್ ಆನಂದ ಭಾಷ್ಪ; ಕರ್ನಾಟಕದ ಮಹಾಜನತೆಗೆ ಧನ್ಯವಾದ ಎಂದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ನೀಡಿದ ಅಖಂಡ ಕರ್ನಾಟಕದ ಮಹಾಜನತೆಗೆ ಧನ್ಯವಾದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕರ್ನಾಟಕದ ಮಹಾಜನತೆಯ ಪಾದಗಳಿಗೆ ನನ್ನ ಸಾಷ್ಟಾಂಗ ನಮಸ್ಕಾರಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಕ್ಕಾಗಿ ಧನ್ಯವಾದಗಳು ಎಂದರು.

ಕಾಂಗ್ರೆಸ್ ಗೆ ಕರ್ನಾಟಕದ ಜನತೆ ಭರ್ಜರಿ ಗೆಲುವು ನೀಡಿರುವುದಕ್ಕೆ ಸಂತಸವಾಗಿದೆ ಎಂದು ಆನಂದ ಭಾಷ್ಪ ಸುರಿಸಿದ್ದಾರೆ. ತಿಹಾರ್ ಜೈಲಿನಲ್ಲಿ ತಾವು ಸಂಕಷ್ಟದ ದಿನಗಳನ್ನು ಕಳೆದ ಕ್ಷಣವನ್ನು ನೆನಪಿಸಿಕೊಂಡು ಭಾವುಕರಾದ ಡಿ.ಕೆ. ಶಿವಕುಮಾರ್, ಅಂದು ಸೋನಿಯಾ ಗಾಂಧಿ ನನ್ನನ್ನು ನೋಡಲು ತಿಹಾರ್ ಜೈಲಿಗೆ ಬಂದಿದ್ದರು. ಆನಂತರದ ದಿನಗಳಲ್ಲಿ ನನ್ನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಕೇಂದ್ರದ ಹಾಗೂ ರಾಜ್ಯದ ಎಲ್ಲಾ ನಾಯಕರು ಸಹಕಾರ ನೀಡಿದ್ದಕ್ಕೆ ಧನ್ಯವಾದಗಳು. ಸಾಮೂಹಿಕ ಪ್ರಯತ್ನದಿಂದಾಗಿ ರಾಜ್ಯದಲ್ಲಿ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read