ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು ಇಂದು ದೆಹಲಿಯ ಕನಾಟ್ ಪ್ಲೇಸ್‌ನಲ್ಲಿರುವ ಕಪುರ್ತಲಾ ಹೌಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಮೂಲಗಳ ಪ್ರಕಾರ ಕುಟುಂಬ ಮತ್ತು ಆತ್ಮೀಯರು ಸೇರಿದಂತೆ 150 ಜನರು ಮಾತ್ರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೋದರ ಸಂಬಂಧಿ ಪರಿಣಿತಿ ಚೋಪ್ರಾ ನಿಶ್ಚಿತಾರ್ಥಕ್ಕಾಗಿ ನಟಿ ಪ್ರಿಯಾಂಕಾ ಚೋಪ್ರಾ ಶನಿವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪಿಗ್ಗಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.
ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಅವರು ಈ ವರ್ಷದ ಆರಂಭದಲ್ಲಿ ಮುಂಬೈ ಉಪಾಹಾರ ಗೃಹದಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಂತರ ಅವರ ಬಗ್ಗೆ ವದಂತಿಗಳು ಹರಡಲು ಪ್ರಾರಂಭಿಸಿದವು. ಅದರ ನಂತರ ವಿಮಾನ ನಿಲ್ದಾಣದಲ್ಲಿ ಐಪಿಎಲ್ ಪಂದ್ಯದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡು ತಮ್ಮ ನಡುವಿನ ಸಂಬಂಧದ ಬಗ್ಗೆ ಅನುಮಾನ ಹೆಚ್ಚಿಸಿದ್ದರು.