HomeKarnatakaBIG NEWS: ಇದು ಅನಿರೀಕ್ಷಿತ ತೀರ್ಪು; ಸೋಲಿನ ಸಂಪೂರ್ಣ ಹೊಣೆ ಹೊರುವುದಾಗಿ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ...

BIG NEWS: ಇದು ಅನಿರೀಕ್ಷಿತ ತೀರ್ಪು; ಸೋಲಿನ ಸಂಪೂರ್ಣ ಹೊಣೆ ಹೊರುವುದಾಗಿ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ. ಇದು ಅನಿರೀಕ್ಷಿತ ಫಲಿತಾಂಶ, ಸೋಲಿನ ಹೊಣೆ ಹೋರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಕಾಂಗ್ರೆಸ್ ಗೆ ನಿಚ್ಚಳ ಬಹುಮತ ಸಿಗುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಅತ್ಯುತ್ತಮ ಆಡಳಿತ ನೀಡಿದ್ದಾರೆ. ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆದಾಗ್ಯೂ ಜನರು ಬಿಜೆಪಿಗೆ ವ್ಯತಿರಿಕ್ತವಾದ ಫಲಿತಾಂಶ ನೀಡಿದ್ದಾರೆ. ಜನರ ತೀರ್ಪಿಗೆ ತಲೆ ಬಾಗುತ್ತೇವೆ.ಬಿಜೆಪಿ ರಾಜ್ಯಾಧ್ಯಕ್ಷನಾಗಿ ಈ ಸೋಲಿನ ಹೊಣೆ ಸಂಪೂರ್ಣವಾಗಿ ಹೊರುವುದಾಗಿ ಹೇಳಿದರು.

ಯಾವ ಕಾರಣಕ್ಕೆ ನಮಗೆ ಹಿನ್ನಡೆಯಾಗಿದೆ ಎಂಬುದನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular