
ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನವೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಆ ಬಳಿಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ಕೆಲವರು ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.
ಟಿಕೆಟ್ ಘೋಷಣೆ ವೇಳೆ ಪಕ್ಷದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಮೊದಲಾದವರಿಗೆ ಟಿಕೆಟ್ ನಿರಾಕರಿಸಲಾಗಿದ್ದು ಈ ಪೈಕಿ ಶೆಟ್ಟರ್ ಕಾಂಗ್ರೆಸ್ ಸೇರಿ ಆ ಪಕ್ಷದಿಂದ ಸ್ಪರ್ಧಿಸಿದ್ದರು. ಹಳಬರಿಗೆ ಅವಕಾಶ ನಿರಾಕರಿಸಿ ಹೊಸ ಮುಖಗಳಿಗೆ ಮಣೆ ಹಾಕಿದ್ದು ಬಿಜೆಪಿಗೆ ದುಬಾರಿಯಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.

