
ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 4,000 ಕಿ.ಮೀ ಕ್ರಮಿಸಿದ 145 ದಿನಗಳ ಯಾತ್ರೆಯು ಸೆಪ್ಟೆಂಬರ್ 30, 2022 ರಂದು ಚುನಾವಣೆ ಎದುರಿಸುತ್ತಿದ್ದ ಕರ್ನಾಟಕವನ್ನು ಪ್ರವೇಶಿಸಿತ್ತು. ಅಕ್ಟೋಬರ್ 23 ರವರೆಗೆ ರಾಹುಲ್ ಗಾಂಧಿ ಮತ್ತು ಇತರ ಪಕ್ಷದ ನಾಯಕರು ಯಾತ್ರೆಯಲ್ಲಿ ಏಳು ಜಿಲ್ಲೆಗಳಲ್ಲಿ ಹೆಜ್ಜೆ ಹಾಕಿದ್ದರು. ರಾಜ್ಯದ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆ ಮೂಲಕ ಯಾತ್ರೆ ಸಾಗಿತ್ತು.
ಈ ಏಳು ಜಿಲ್ಲೆಗಳು ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಲ್ಲಿ 51 ಕ್ಷೇತ್ರಗಳನ್ನು ಹೊಂದಿದ್ದು, ಅದರಲ್ಲಿ ಕಾಂಗ್ರೆಸ್ 36 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದೆ.

