HomeKarnatakaಪಕ್ಷದ ಬಾವುಟದ ಜೊತೆ ಕೇಸರಿ ಬಾವುಟ ಹಿಡಿದು ಕಾಂಗ್ರೆಸ್ ಕಾರ್ಯಕರ್ತರ 'ಸಂಭ್ರಮಾಚರಣೆ'

ಪಕ್ಷದ ಬಾವುಟದ ಜೊತೆ ಕೇಸರಿ ಬಾವುಟ ಹಿಡಿದು ಕಾಂಗ್ರೆಸ್ ಕಾರ್ಯಕರ್ತರ ‘ಸಂಭ್ರಮಾಚರಣೆ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬೇಳೂರು ಗೋಪಾಲಕೃಷ್ಣ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಸಾಗರದ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಪಕ್ಷದ ಬಾವುಟದ ಜೊತೆಗೆ ಕೇಸರಿ ಬಾವುಟ ಹಿಡಿದು ತಮ್ಮ ಮುಖಂಡರ ಪರ ಜೈಕಾರದ ಘೋಷಣೆಗಳನ್ನು ಕೂಗಿದ್ದಲ್ಲದೆ ಬೈಕ್ ಹಾಗೂ ತೆರೆದ ವಾಹನಗಳಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದಾರೆ.

ಬೇಳೂರು ಗೋಪಾಲಕೃಷ್ಣ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ನೀಡಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಶಿಷ್ಯನ ಗೆಲುವಿನ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ನಡೆಯಬೇಕಿದೆ. ಹೀಗಾಗಿ ಶಾಸಕ ಗೋಪಾಲಕೃಷ್ಣ ಅವರ ಜೊತೆಗಿದ್ದು, ಸೂಕ್ತ ಮಾರ್ಗದರ್ಶನ ನೀಡುತ್ತೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular