ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಪ್ರಾಥಮಿಕ ಪರಾಮರ್ಶನಾ ಸಭೆ ನಡೆಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ನಿರ್ಗಮಿತ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್, ಸಿ.ಸಿ.ಪಾಟೀಲ್, ಮುನಿರತ್ನ, ರವಿಸುಬ್ರಹ್ಮಣ್ಯ ಸೇರಿದಂತೆ ಹಲವು ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
ಸೋಲಿಗೆ ಕಾರಣವೇನು? ಎಂಬ ಬಗ್ಗೆ ಪ್ರಾಥಮಿಕ ಹಂತದಲ್ಲಿ ಚರ್ಚೆ ನಡೆಸಲಾಗಿದೆ.