ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ಬಹುಮತ ಸಿಕ್ಕಿದೆ. ಇದು ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ ರೆಡ್ಡಿ ತಿಳಿಸಿದ್ದಾರೆ.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿದ ರೇವಂತ್ ರೆಡ್ಡಿ, ಕರ್ನಾಟಕ ಫಲಿತಾಂಶ ಲೋಕಸಭಾ ಚುನಾವಣೆ ದಿಕ್ಸೂಚಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಗೆ ಶಕ್ತಿ ಬಂದಿದೆ. ಹಿಮಾಚಲ ಪ್ರದೇಶದ ಬಳಿಕ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಗೆದ್ದಿದೆ ಎಂದರು.
9 ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದಿವೆ. ತೆಲಂಗಾಣದಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅನ್ಯ ಮಾರ್ಗ, ಕುತಂತ್ರದಿಂದ ಅಧಿಕಾರ ಹಿಡಿಯುತ್ತದೆ. ಕಳೆದ ಬಾರಿ ಶ್ರೀರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿತ್ತು. ಈ ಬಾರಿ ಹನುಮನ ಹೆಸರು ಜಪಿಸಿತ್ತು. ರಾಮನಿಗೆ ವಂಚಿಸಿದವರನ್ನು ಹನುಮ ಹೇಗೆ ಕೈ ಹಿಡಿಯುತ್ತಾನೆ ? ಹನುಮಂತನೇ ಬಿಜೆಪಿಯನ್ನು ಸೋಲುವಂತೆ ಮಾಡಿದ್ದಾನೆ ಎಂದು ಹೇಳಿದರು.