ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ಮುಂದುವರೆದಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಹುದ್ದೆಗಾಗಿ ತೀವ್ರ ಪೈಪೋಟಿ ನಡೆದಿದೆ. ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.