HomeKarnatakaBIG NEWS: ಈ ಬಾರಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ; ಸೈದ್ಧಾಂತಿಕ ಹೋರಾಟ ಮುಂದುವರೆಸುತ್ತೇವೆ ಎಂದ ಸಿ.ಟಿ. ರವಿ

BIG NEWS: ಈ ಬಾರಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ; ಸೈದ್ಧಾಂತಿಕ ಹೋರಾಟ ಮುಂದುವರೆಸುತ್ತೇವೆ ಎಂದ ಸಿ.ಟಿ. ರವಿ

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಈ ಬಾರಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಿರಾಸೆ ವ್ಯಕ್ತಪಡಿಸಿದ್ದಾರೆ.

ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ನಾವು ಸೈದ್ಧಾಂತಿಕ ಹೋರಾಟ ಮುಂದುವರೆಸುತ್ತೇವೆ. ಜೆಡಿಎಸ್ ನವರು ಕಾಂಗ್ರೆಸ್ ಪಕ್ಷಕ್ಕೆ ಸಪೋರ್ಟ್ ಮಾಡಿದ್ದಾರೆ. ಕಾಂಗ್ರೆಸ್ ಒಳ್ಳೆಯ ಆಡಳಿತ ಕೊಡಲಿ ಎಂಬುದು ನಮ್ಮ ಅಪೇಕ್ಷೆ.

200 ಯುನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ಹಣ, 10 ಕೆಜಿ ಅಕ್ಕಿ ಕೊಡೋದು ಒಳ್ಳೆಯದಲ್ವಾ? ಈಗಲೇ ಪ್ರತಿಕ್ರಿಯೆ ನೀಡುವುದು ಬೇಡ, ಕಾದುನೋಡೋಣ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular