ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಮಠ – ಮಂದಿರಗಳಿಗೆ ನೀಡಿದ ದೇಣಿಗೆಗೂ ಲಂಚಕ್ಕೆ ಬೇಡಿಕೆ ಇಡಲಾಗಿತ್ತು ಎಂದು ಸ್ಪೋಟಕ ಆರೋಪ ಮಾಡಿದ್ದ ಫಕೀರ ದಿಂಗಾಲೇಶ್ವರ ಶ್ರೀಗಳು, ಈಗ ಬಿಜೆಪಿ ಸೋಲಿನ ಇಂದಿನ ಕಾರಣವನ್ನು ವಿಶ್ಲೇಷಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣವಿಲ್ಲದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಲಾಗಿತ್ತು. ಅವರು ಎಲ್ಲರನ್ನೂ ಒಳಗೊಳ್ಳುವ ಸಮಾಜಕ್ಕೆ ಶ್ರಮಿಸುತ್ತಿದ್ದರು ಎಂದರು.
ಕೆಲವರ ಸ್ವಾರ್ಥ ಹಾಗೂ ವೈಯಕ್ತಿಕ ಲಾಭಕ್ಕೆ ಯಡಿಯೂರಪ್ಪನವರನ್ನು ಪದಚ್ಯುತಿಗೊಳಿಸಲಾಗಿದ್ದು, ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲುವಂತಾಯಿತು ಎಂದು ಅಭಿಪ್ರಾಯಪಟ್ಟ ಶ್ರೀಗಳು, ಈಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ರಾಜ್ಯದ ಜನತೆಗೆ ಒಳಿತು ಮಾಡಲಿ ಎಂದು ಹಾರೈಸಿದರು.