ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ನ ಸಂಗ್ರೂರ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಯಾಲಯ ಖರ್ಗೆಯವರಿಗೆ ಸಮನ್ಸ್ ನೀಡಿದೆ.
ಬಜರಂಗದಳ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ತನ್ನ ಯುವ ಘಟಕವಾದ ಬಜರಂಗದಳಕ್ಕೆ ಕ್ರಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ವಿ ಹೆಚ್ ಪಿಯ ಚಂಡಿಘಡ ಘಟಕ ಹಾಗೂ ಬಜರಂಗದಳ 100 ಕೋಟಿ ರೂಪಾಯಿ ಮಾನಹಾನಿ ಪರಿಹಾರ ಕೇಳಿ ಕೋರ್ಟ್ ಮೆಟ್ಟಿಲೇರಿತ್ತು.