ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ನಲ್ಲಿ ಸರ್ಕಸ್ ನಡೆಯುತ್ತಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಸ್ಪರ್ಧೆ ಇದೆ.
ಇದರ ಮಧ್ಯೆ ಸಿದ್ದರಾಮಯ್ಯ ಪರ ಶಾಸಕ ವಿಜಯಾನಂದ ಕಾಶಪ್ಪನವರ್ ಬ್ಯಾಟಿಂಗ್ ಮಾಡಿದ್ದು, ಟಗರು ಬರುತ್ತೆ ಗುಮ್ಮುತ್ತೆ ಎನ್ನುವ ಮೂಲಕ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಆಯ್ಕೆಯಾಗಲಿದ್ದಾರೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ಐದು ವರ್ಷಗಳ ಕಾಲ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ಸಲುವಾಗಿ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.