ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಸ್ಥಾನ ಕೊಟ್ಟರೆ ಮಾತ್ರ ಸ್ವೀಕರಿಸುತ್ತೇನೆ. ಇಲ್ಲವಾದರೆ ಯಾವುದೇ ಸ್ಥಾನ ಬೇಡ ಎಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಎಂ ಖಾತೆ ಇಲ್ಲವಾದರೆ ಬೇರೆ ಯಾವ ಖಾತೆಯೂ ನನಗೆ ಬೇಡ, ಸಂಪುಟದಲ್ಲಿಯೂ ಸೇರ್ಪಡೆಯಾಗಲ್ಲ ಸಿಎಂ ಹುದ್ದೆ ಹೊರತುಪಡಿಸಿ ಬೇರೆ ಯಾವ ಹುದ್ದೆಯೂ ಬೇಡ ಎಂದು ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಹೈಕಮಾಂಡ್ ಭೇಟಿಗಾಗಿ ಅತ್ತ ದೆಹಲಿಗೆ ಪ್ರಯಾಣಿಸಿದರೆ, ಇತ್ತ ಡಿ.ಕೆ. ಶಿವಕುಮಾರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಖಾಸಗಿ ಫಾರ್ಮ್ ಹೌಸ್ ಗೆ ತೆರಳಿದ್ದಾರೆ.