HomeKarnatakaBIG NEWS: ಕಾಂಗ್ರೆಸ್ ನ ಹಿಂಸಾ ಸ್ಕೀಮ್ ಸಹಿಸಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್...

BIG NEWS: ಕಾಂಗ್ರೆಸ್ ನ ಹಿಂಸಾ ಸ್ಕೀಮ್ ಸಹಿಸಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು, ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನ ಹಿಂಸಾ ಸ್ಕೀಮ್ ನಾವು ಸಹಿಸಲ್ಲ ಎಂದು ಹೇಳಿದ್ದಾರೆ.

ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೊಸಕೋಟೆಯಲ್ಲಿ ಓರ್ವ ಕಾರ್ಯಕರ್ತನ ಹತ್ಯೆ ನಡೆದಿದ್ದು, ಇನ್ನಿಬ್ಬರ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರ ಪ್ರವೃತ್ತಿಗೆ ಆಸ್ಪದ ಕೊಡಬಾರದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ವಿವಿಧೆಡೆ ದೇಶದ್ರೋಹಿ ಚಟುವಟಿಕೆಗಳು ಹೆಚ್ಚುತ್ತಿವೆ. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹಿ ಚಟುವಟಿಕೆಯಾಗಿದ್ದು ಇದನ್ನು ನಿಯಂತ್ರಿಸಬೇಕು. ಇಂತಹ ದೇಶದ್ರೋಹಿ ಚಟುವಟಿಕೆ ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತ ಬದಿಗಿಟ್ಟು ಈಗಾಗಲೇ ಘೋಷಿಸಿರುವ ಪ್ರಣಾಳಿಕೆಯ ಅಂಶಗಳನ್ನು ಈಡೇರಿಸಲು ಮುಂದಾಗಬೇಕು. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಬಂಧಿಸುವಂತೆ ಪೊಲಿಸ್ ಇಲಾಖೆಗೆ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular